ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ..

ಬೆಂಗಳೂರು,ಸೆಪ್ಟಂಬರ್ ,3,2022(www.justkannada.in):  ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕುಮಾರಸ್ವಾಮಿ ಲೇಔಟ್ ನ ಯಲಚೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಡುಗೆ ಸಿಲಿಂಡರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದ್ದು ಗಾಯಗೊಂಡವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್  ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Gas-cylinder-explosion- Two –injured-bangalore