ತಲಕಾವೇರಿಯ ಗಜಗಿರಿ ಬೆಟ್ಟ ಕುಸಿತ, ವಿಜ್ಞಾನಿಗಳಿಂದ 16ಪುಟಗಳ ಪ್ರಾಥಮಿಕ ವೈಜ್ಞಾನಿಕ ವರದಿ ಸಲ್ಲಿಕೆ

kannada t-shirts

ಬೆಂಗಳೂರು,ಡಿಸೆಂಬರ್,18,2020(www.justkannada.in) : ಭಾರಿ ಮಳೆಯಿಂದ ಆಗಸ್ಟ್ ತಿಂಗಳಲ್ಲಿ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿತದ ದುರಂತ ಮತ್ತು ಅದರಿಂದ ಸಂಭವಿಸಿದ ಮಾನವ ಪ್ರಾಣಹಾನಿ ಮತ್ತು ಅದಕ್ಕೆ ಕಾರಣವಾದ ಅಂಶಗಳ ಕುರಿತು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ವಿಜ್ಞಾನಿಗಳು ಕೊಡಗು ಜಿಲ್ಲಾಡಳಿತಕ್ಕೆ 16ಪುಟಗಳ ಪ್ರಾಥಮಿಕ ವೈಜ್ಞಾನಿಕ ವರದಿಯನ್ನು ಸಲ್ಲಿಸಿದ್ದಾರೆ.

Teachers,solve,problems,Government,bound,Minister,R.Ashok

ಹಳೆಯ ಭೂ ಕುಸಿತದಲ್ಲಿ ಉಂಟಾದ ಬೆಟ್ಟದ ಮೇಲಿನ ಬಿರುಕುಗಳು, ಅರಣ್ಯ ಇಲಾಖೆಯ ಕಂದಕ, ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ, ಅನಗತ್ಯ ಮಾನವ ಹಸ್ತಕ್ಷೇಪ, ಸಾಮಾನ್ಯಕ್ಕಿಂತ ಅಧಿಕ ಮಳೆ ಇವುಗಳಿಂದಾಗಿಯೇ ಆಗಸ್ಟ್ ನಲ್ಲಿ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದಿದೆ ಎನ್ನುವ ಅಂಶವನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ತಜ್ಞರು ಬಹಿರಂಗಪಡಿಸಿದ್ದಾರೆ.

ಆಗಸ್ಟ್ 6ರಂದು ತಲಕಾವೇರಿಯಲ್ಲಿ ಸಂಭವಿಸಿದ ಗಜಗಿರಿ ಬೆಟ್ಟ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳ ಕೋರಿಕೆ ಹಿನ್ನೆಲೆಯಲ್ಲಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ತಜ್ಞರಾದ ಕಪಿಲ್ ಸಿಂಗ್ ಹಾಗೂ ಕಮಲ್ ಕುಮಾರ್ ಅವರ ತಂಡ ಆ.14 ಮತ್ತು 15ರಂದು ಭೇಟಿ ನೀಡಿದ್ದರು. ಭೂ ಕುಸಿತ ಸ್ಥಳದಲ್ಲಿ ಅಧ್ಯಯನ ನಡೆಸಿದ ಇವರುಗಳು ದುರ್ಘಟನೆಗೆ ಕಾರಣವಾದ ಅಂಶಗಳು.

ಈ ಹಿಂದೆ ಅದೇ ಸ್ಥಳದಲ್ಲಿ ನಡೆದಿದ್ದ ಅಲ್ಪ ಪ್ರಮಾಣದ ಭೂ ಕುಸಿತದ ಇತಿಹಾಸ, ಮುಂದೆ ಇಂತಹ ದುರಂತಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಿದ್ದಾರೆ.

ತಲಕಾವೇರಿಯಲ್ಲಿ ಆಗಸ್ಟ್ 6ರಂದು ಸಂಭವಿಸಿದ ಭೂ ಕುಸಿತಕ್ಕೂ ಮೊದಲು 3 ಬಾರಿ ಅಲ್ಲಿ ಇಂಥಹದ್ದೇ ಘಟನೆಗಳು ನಡೆದಿದೆ ಎಂದು ತಮ್ಮ ವರದಿಯಲ್ಲಿ ವಿಜ್ಞಾನಿಗಳು ಉಲ್ಲೇಖಿಸಿದ್ದಾರೆ. ಬ್ರಹ್ಮಗಿರಿ ಬೆಟ್ಟಶ್ರೇಣಿಯಲ್ಲಿ ಮೊದಲ ಭೂ ಕುಸಿತ 2007ರ ಜೂನ್ 30ಕ್ಕೆ ಸಂಭವಿಸಿದರೆ, 2ನೇ ಭೂ ಕುಸಿತ 2018ರಲ್ಲಿ ಹಾಗೂ 3ನೇ ಘಟನೆ 2019ರ ಆಗಸ್ಟ್ 19ಕ್ಕೆ ನಡೆದಿದೆ ಎಂದು ಅಧ್ಯಯನ ವರದಿಯ ವಿವರಗಳನ್ನು ದಾಖಲೆಯಾಗಿ ನೀಡಿದ್ದಾರೆ.

Gazagiri hill,slope,Talakaveri,16 pages,preliminary,scientists,Scientific,report,submission
ಕೃಪೆ : internet

ಈ ಎಲ್ಲ ಭೂ ಕುಸಿತಗಳ ಮುಂದುವರಿದ ಭಾಗವಾಗಿ 2020ರ ಆಗಸ್ಟ್ 6ರಂದು ಗಜಗಿರಿ ಬೆಟ್ಟ ಕುಸಿದಿದೆ ಎನ್ನುವ ಅಂಶವನ್ನು ತಜ್ಞರು ವರದಿಯಲ್ಲಿ ವಿವರಿಸಿದ್ದಾರೆ.  ಗಜಗಿರಿ ಬೆಟ್ಟದ ಕೆಳಭಾಗ, ರಸ್ತೆ ನಿರ್ಮಾಣ ಸೇರಿ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಿತಿ ಮೀರಿದ ಮಾನವ ಹಸ್ತಕ್ಷೇಪ ನಡೆದಿದೆ. ಅವೈಜ್ಞಾನಿಕ ನಿರ್ಮಾಣಗಳು ಬೆಟ್ಟವನ್ನು ದುರ್ಬಲಗೊಳಿಸಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

key words : Gazagiri hill-slope-Talakaveri-16 pages-preliminary-scientists-Scientific-report-submission

website developers in mysore