ಜಿಲೆಟಿನ್ ಸ್ಪೋಟ ದುರಂತ: ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹ….

ಬೆಂಗಳೂರು,ಜನವರಿ,22,2021(www.justkannada.in): ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲೆಟಿನ್ ಸ್ಪೋಟದಿಂದ ಮೃತಪಟ್ಟ ಕಾರ್ಮಿಕರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.jk

ಈ ಕುರಿತು ಟ್ವೀಟ್ ಮಾಢಿರುವ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದಿದ್ದಾರೆ.gelatin-explosion-tragedy-former-cm-hd-kumaraswamy-action-responsible

ಹಾಗೆಯೇ ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಹೆಚ್.ಡಿಕೆ,  ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Key words:  Gelatin- Explosion –Tragedy- Former CM -HD Kumaraswamy -action – responsible