ಉದ್ಧವ್‌ ಠಾಕ್ರೆ ಹೇಳಿಕೆ ವಿಚಾರ – ‘ಕೈ’ ನಾಯಕರಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸವಾಲು…

ಬೆಂಗಳೂರು,ಜನವರಿ,18,2021(www.justkannada.in):  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತುಗಳು ಉದ್ಧಟತನದಿಂದ ಕೂಡಿವೆ. ದೇಶದ ಏಕತೆ- ಸಮಗ್ರತೆಗೆ ಧಕ್ಕೆ ಉಂಟು ಮಾಡುವಂಥ ಇಂಥ ವ್ಯಕ್ತಿಯ ನೇತೃತ್ವದ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಕಾಂಗ್ರೆಸ್‌ ಪಕ್ಷ ಕೂಡಲೇ ವಾಪಸ್‌ ಪಡೆಯಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಯ ಮಾಡಿದರು.jk

ಬೆಂಗಳೂರಿನ ಮಲ್ಲೇಶ್ವರದ ಗಾಂಧಿಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಮುಖ್ಯಮಂತ್ರಿಯಂಥ ಸಾಂವಿಧಾನಿಕ, ಘನತೆಯುಳ್ಳ ಪದವಿಯಲ್ಲಿದ್ದು ಅತ್ಯಂತ ಬೇಜವಾಬ್ದಾರಿಯಾಗಿ  ಹೇಳಿಕೆ ನೀಡಿರುವ ಉದ್ಧವ್‌ ಠಾಕ್ರೆ ಮಾತುಗಳನ್ನು ಒಪ್ಪಲು ಸಾಧ್ಯವೇ ಇಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಎನ್ನುವುದು ಮುಗಿದ ಅಧ್ಯಾಯ ಎಂದರು.

ಹಳೆಯ ವಿಷಯವನ್ನು ಕೆದಕುತ್ತ ದೇಶದ ಏಕತೆಗೆ ಧಕ್ಕೆ ತರುವಂಥ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಇದು ಅನಪೇಕ್ಷಿತ-ಅನಗತ್ಯ. ಕರ್ನಾಟಕ ಇಂಥ ಹೇಳಿಕೆಗಳಿಗೆ, ಬೆದರಿಕೆಗಳಿಗೆ ಬಗ್ಗುವ-ಹೆದರುವ ರಾಜ್ಯವಲ್ಲ. ನಮ್ಮ ಸಹಿಷ್ಣುತೆ, ಶಾಂತಿಪ್ರಿಯತೆಯನ್ನೇ ದೌರ್ಬಲ್ಯ ಎಂದು ಎಣಿಸಬಾರದು. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಾದರೂ ಇನ್ನು ಗಡಿ ವಿಷಯವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಶಿವಸೇನೆಯಂಥ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಕಿಡಿ ಕಾರಿದರು.

ಕಾಂಗ್ರೆಸ್‌ ನಾಯಕರು, ಅದರಲ್ಲೂ ಸಿದ್ದರಾಮಯ್ಯ ಅವರಂಥ ನಾಯಕರು ಉದ್ಧವ್‌ ಠಾಕ್ರೆ ಹೇಳಿಕೆಯನ್ನು ಖಂಡನೆ ಮಾಡಿರುವುದು ಸ್ವಾಗತಾರ್ಹ. ಕೂಡಲೇ ಅವರೆಲ್ಲರೂ ತಮ್ಮ ಪಕ್ಷದ ಹೈಕಮಾಂಡ್‌ ಮೇಲೆ ಒತ್ತಡ ಹೇರಿ ಶಿವಸೇನೆ ಸರಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್‌ ಪಡೆಯುವಂತೆ ಮಾಡಬೇಕು. ಆಗ ಮಾತ್ರ ಕರ್ನಾಟಕದ ಕುರಿತ ಕಾಂಗ್ರೆಸ್‌ ಪಕ್ಷದ ಬದ್ಧತೆ ಏನೆಂಬುದು ಜನರಿಗೆ ಗೊತ್ತಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ್ ಅಭಿಪ್ರಾಯಪಟ್ಟರು.Get back - Uddhav Thackeray- support- DCM -Ashwath Narayan -challenges - congress

ನಾವು ಭಾರತೀಯರು

ಭಾರತ ಇವತ್ತು ಬದಲಾಗಿದೆ. ಸಂಘಟಿತವಾಗಿ ಹೊರಗಿನ ಶಕ್ತಿಗಳನ್ನು ಎದುರಿಸುತ್ತ ವೇಗವಾಗಿ ಪ್ರಗತಿ ಹೊಂದುತ್ತಿದೆ. ಇಂಥ ಸಂದರ್ಭದಲ್ಲಿ ಸಂಕುಚಿತ ವಿಷಯಗಳನ್ನೂ, ಅದರಲ್ಲೂ ಎಂದೋ ಮುಗಿದ ಅಧ್ಯಾಯವನ್ನು ಇಟ್ಟುಕೊಂಡು ನೆಮ್ಮದಿ ಕೆಡಿಸುವಂಥ ಕೆಲಸ ಮಾಡಬಾರದು. ಒಂದು ರಾಜ್ಯದ ಮುಖ್ಯಮಂತ್ರಿ ಪದವಿಯಲ್ಲಿ ಕೂತ ವ್ಯಕ್ತಿಗೆ ಇದು ಶೋಭೆಯಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್  ಖಾರವಾಗಿ ನುಡಿದರು.

ENGLISH SUMMARY….

DCM Ashwathnarayan challenges Cong. leaders to withdraw support given to Uddhav Thackeray
Bengaluru, Jan. 18, 2021 (www.justkannada.in): Condemning the statement of Maharashtra Chief Minister Uddhav Thackeray on the Belagavi border dispute, Deputy Chief Minister Dr. C.N. Ashwathnarayan asked the Congress party to withdraw the support given to the Maharashtra government that is causing harm to the unity and integrity of the country.
He inaugurated the COVID vaccination campaign on Monday held at the Primary Health Care Center in Gandhigram, Malleswaram, Bengaluru. Speaking to the press persons, he said, “being in a responsible post, Uddhav Thackeray should not give such irresponsible statements, how can we accept it? The Karnataka and Maharashtra border row is a closed chapter,” he said.
He welcomed former CM Siddaramaiah for condemning Uddhav Thackeray’s statement, and also asked the Congress leaders to pressurize their high command to withdraw the support given to Uddhav Thackeray’s government in Maharashtra and prove their commitment to the people of Karnataka.
Keywords: Belagavi-Maharashtra border dispute/ Maharashtra CM/ statement over border dispute

Key words: Get back – Uddhav Thackeray- support- DCM -Ashwath Narayan -challenges – congress