ಶಾಲೆಯಿಂದ ಮನೆಗೆ ಬರುವಾಗ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ.

Promotion

ಉಡುಪಿ,ಆಗಸ್ಟ್,9,2022(www.justkannada.in):  ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಅವಾಂತರವನ್ನೇ ಸೃಷ್ಠಿಸಿದ್ದು ಈ ನಡುವೆ ಶಾಲೆಯಿಂದ ಮನೆಗೆ ವಾಪಸ್ ಬರುವ ವೇಳೆ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿಯ  ಕಾಲ್ತೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸನ್ನಿಧಿ ನೀರಿನಲ್ಲಿ ಕೊಚ್ಚಿಹೋದ ಬಾಲಕಿ. ಬಾಲಕಿಗಾಗಿ ಹುಡುಕಾಟ ಮುಂದುವರೆದಿದೆ. ಸನ್ನಿಧಿ ಶಾಲೆಯಿಂದ ಮನೆಗೆ ವಾಪಸ್ ಬರುವ ವೇಳೆ ಮಳೆಯ ರಭಸಕ್ಕೆ ಕೊಚ್ಚಿಹೋಗಿದ್ದಾಳೆ ಎನ್ನಲಾಗಿದೆ.

ಇನ್ನೊಂದೆಡೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಾಚಗೊಂಡನಹಳ್ಳಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.  ಸುಜಾತ(55) ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೃಷ್ಣಮೂರ್ತಿ ಎಂಬುವವರಿಗೆ ಗಾಯಗಳಾಗಿದೆ.

Key words: girl –death-rain- udupi