ಖಾದಿ, ಗ್ರಾಮೀಣ ಕೈಗಾರಿಕೆಗಳಲ್ಲಿ ತಯಾರಿಸಿದ ಉತ್ಪನ್ನಗಳನ್ನು ಉಡುಗೊರೆಯಾಗಿ ನೀಡಿ: ಪ್ರಧಾನಿ ಮೋದಿ ಕರೆ

ಬೆಂಗಳೂರು, ಆಗಸ್ಟ್ 28, 2022 (www.justkannada.in): ಮುಂಬರುವ ಹಬ್ಬಗಳಲ್ಲಿ ಖಾದಿ ಗ್ರಾಮೀಣ ಕೈಗಾರಿಕೆಗಳಲ್ಲಿ ತಯಾರಿಸಿದ ಉತ್ಪನ್ನಗಳನ್ನ ಮಾತ್ರ ನಿಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆಯಾಗಿ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಅಹ್ಮದಾಬಾದ್ʼನಲ್ಲಿ ನಡೆದ ‘ಖಾದಿ ಉತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಪ್ರಧಾನಿ ಮೋದಿ ಈ ವಿಶೇಷ ಮನವಿ ಮಾಡಿದ್ದಾರೆ.

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಖಾದಿ ಮತ್ತು ಅದರ ಪ್ರಾಮುಖ್ಯತೆಗೆ ಗೌರವ ಸಲ್ಲಿಸಲು ಖಾದಿ ಉತ್ಸವವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಚರಕವನ್ನ ಸಹ ನೇಯ್ಯಿದರು.

ಖಾದಿ ಭಾರತವನ್ನ ಅಭಿವೃದ್ಧಿ ಮತ್ತು ಸ್ವಾವಲಂಬಿಯನ್ನಾಗಿ ಮಾಡಲು ಸ್ಫೂರ್ತಿಯಾಗಬೇಕಿದೆ. ಇದಕ್ಕಾಗಿ ಹೆಚ್ಚಾಗಿ ಖಾದಿ ಬಳಸಬೇಕಿದೆ. ಮುಂದಿನ ಹಬ್ಬಗಳ ಸಮಯದಲ್ಲಿ ಖಾದಿ ಹಾಗೂ ಗ್ರಾಮೀಣ ಕೈಗಾರಿಕೆಗಳಲ್ಲಿ ತಯಾರಿಸಿದ ಉತ್ಪನ್ನಗಳನ್ನ ಉಡುಗೊರೆಯಾಗಿ ನೀಡಿ ಎಂದು ಸಲಹೆ ನೀಡಿದ್ದಾರೆ.