ದಾವಣಗೆರೆ ಜಿಲ್ಲೆಗೂ ಒಂದು ಸಚಿವ ಸ್ಥಾನ ನೀಡಿ- ಸಂಸದ ಜಿ.ಎಂ ಸಿದ್ಧೇಶ್ವರ್ ಆಗ್ರಹ…

Promotion

ದಾವಣಗೆರೆ,ಜ,29,2020(www.justkannada,in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳುತ್ತಿದ್ದಾರೆ. ಈ ನಡುವೆ ದಾವಣಗೆರೆ ಜಿಲ್ಲೆಗೂ ಒಂದು ಸಚಿವ ಸ್ಥಾನ ನೀಡಬೇಕೆಂದು ಸಂಸದ ಜಿ.ಎಂ ಸಿದ್ಧೇಶ್ವರ್ ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಂಸದ ಜಿ.ಎಂ ಸಿದ್ಧೇಶ್ವರ್, ಸಚಿವ ಸಂಪುಟ ವಿಸ್ತರಣೆ ವೇಳೆ ದಾವಣಗೆರೆ ಜಿಲ್ಲೆಯನ್ನೂ ಪರಿಗಣಿಸಿ. ಈ ಜಿಲ್ಲೆಯ ಯಾರಾದರೂ ಒಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡಿ. ಇವರಿಗೆ ಸಚಿವ ಸ್ಥಾನ ನೀಡಿ ಎಂದು ನಾನು ಹೇಳಲ್ಲ ಎಂದು ತಿಳಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿನ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಹೀಗಾಗಿ ಈ ಪೈಕಿ ಒಬ್ಬರಿಗಾದರೂ ಮಂತ್ರಿಗಿರಿ ನೀಡಿ ಎಂದು ಸಂಸದ ಜಿ.ಎಂ ಸಿದ್ಧೇಶ್ವರ್ ಆಗ್ರಹಿಸಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ  ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚಿಸಲಿದ್ದು ಬಳಿಕ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

Key words: Give  ministerial position – Davanagere district-MP –GM Siddheshwar