ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ.

Promotion

ಬೆಂಗಳೂರು,ನವೆಂಬರ್,2,2022(www.justkannada.in):  ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಈ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವಾರದ  ಪ್ರಹ್ಲಾದ್ ಜೋಶಿ ನಿರ್ಮಲಾ ಸೀತಾರಾಮನ್ ಪೀಯೂಷ್ ಗೋಯಲ್, ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು.

ಸರ್ಕಾರವು 5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆಯಲ್ಲಿದ್ದು,  ದೇಶ ವಿದೇಶಗಳ ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಉದ್ಧೇಶಿಸಿ ವರ್ಚೂವಲ್ ಮೂಲಕ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ.

 

Key words: Global -Capital -Investors -Conference – Bangalore.