ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಆರ್ಥಿಕ ಹೊಡೆತ: ರೈತರಿಗೆ ಜಾಗೃತಿ ಮೂಡಿಸುತ್ತೇವೆ-ಡಿ.ಕೆ ಶಿವಕುಮಾರ್….

ಬೆಂಗಳೂರು,ಡಿಸೆಂಬರ್,11,2020(www.justkannada.in): ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಗೋಹತ್ಯೆ ನಿಷೇಧ ಕಾಯ್ದಯಿಂದ ಆರ್ಥಿಕ ಹೊಡೆತ ಬೀಳಲಿದೆ. ಹೀಗಾಗಿ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.logo-justkannada-mysore

ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನೆಲೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಆರ್ಥಿಕ ತೊಂದರೆ ಉಂಟಾಗಲಿದೆ. ಚರ್ಮೋದ್ಯಮದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಈ  ಬಗ್ಗೆ ರಾಜ್ಯಾದ್ಯಂತ ರೈತರಿಗೆ ಜಾಗೃತಿ ಮೂಡಿಸುತ್ತೇವೆ. ಪ್ರತಿ ತಾಲ್ಲೂಕಿನಲ್ಲೂ ಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು.go-killing-prohibition-act-economic-blow-awareness-kpcc-president-dk-sivakumar

ಗೋ ಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರವಾಗಬೇಕಿದೆ. ಸರ್ಕಾರ ಜಾರಿ ಮಾಡಲು ಹೊರಟಿರುವ ಈ ಕಾಯ್ದೆಗೆ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

Key words: Go Killing Prohibition Act-economic -blow -awareness –kpcc president-DK Sivakumar.