ಕೊರೋನಾದಂತಹ ಅಡ್ಡಿ ಆತಂಕಗಳ ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರ್ಕಾರದ ಗುರಿ- ಸಚಿವ ಡಾ.ಕೆ.ಸುಧಾಕರ್….

Promotion

ಚಿಕ್ಕಬಳ್ಳಾಪುರ,ಜು,28,2020(www.justkannada.in): ಕರ್ನಾಟಕದ ಮಹಾಜನತೆಯ ಜನಾದೇಶವನ್ನು ಪಡೆದುಕೊಂಡು ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರ ಜುಲೈ 26 ನೇ ತಾರೀಕಿನಂದು 1 ವರ್ಷ ಪೂರೈಸಿದೆ. ರಾಜ್ಯದ ಮಹಾಜನತೆಯ ಆಶೋತ್ತರಗಳಿಗೆ ತಕ್ಕಂತೆ ಸಮೃದ್ಧ ಕರ್ನಾಟಕ ನಿರ್ಮಿಸುವ ಸಂಕಲ್ಪದೊಂದಿಗೆ ಕಾರ್ಯೋನ್ಮುಖವಾಗಿರುವ ಬಿಜೆಪಿ ಸರ್ಕಾರ ಕಳೆದ 1 ವರ್ಷದಲ್ಲಿ, ಅತೀವೃಷ್ಠಿ, ಅನಾವೃಷ್ಠಿ, ಈಗ ಕೊರೋನ ದಂತಹ ಹಲವು ಅಡ್ಡಿ ಆತಂಕಗಳನ್ನು ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk-logo-justkannada-logo

ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್,  ರಾಜ್ಯದ ಇತಿಹಾಸದಲ್ಲಿ ಎಂದೂ ಕಂಡಿರದ ಇಂತಹ ಸವಾಲುಗಳ ನಡುವೆಯೂ ಜನನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಯಕವೇ ಕೈಲಾಸ ಎಂಬ ಬಸವಣ್ಣನವರ ಉಕ್ತಿಯಂತೆ ಅವಿರತಾವಾಗಿ ಶ್ರಮಿಸುತ್ತಿದ್ದಾರೆ. ಕೊರೋನಾ ಸಂಕಷ್ಟದಲ್ಲಿರುವ ಜನತೆಯ ಜೀವನ ಸುಗಮವಾಗಿ ಸಾಗಲು ಪೂರಕ ಸೌಲಭ್ಯಗಳನ್ನು, ಪರಿಹಾರಗಳನ್ನು ಸಕಾಲದಲ್ಲಿ ಒದಗಿಸುವ ಬೃಹತ್ ಹೊಣೆಗಾರಿಕೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜೊತೆಯಾಗಿ ನಿರ್ವಹಿಸುತ್ತಿವೆ  ಎಂದು ಶ್ಲಾಘಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಜನಪ್ರತಿನಿಧಿಗಳು ಸಚಿವರಾಗಿ ಕಾರ್ಯ ನಿರ್ವಹಿಸಿರುವುದು ಬಹಳ ವಿರಳ. ಆದರೆ, ನನಗೆ ಅಂತಹ ಸದಾವಕಾಶ ಕಲ್ಪಿಸಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನನ್ನ ಧ್ಯೇಯ. ಮೂಲ ಸೌಕರ್ಯದಿಂದ ಹಿಡಿದು ರೈತರ ಹಿತ ಕಾಯುವ ಎಲ್ಲಾ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ನಾನು ಬದ್ಧನಾಗಿದ್ದೇನೆ. ನನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಈಡೆರಿಸುತ್ತಾ ಸಾಗುತ್ತಿದ್ದೇನೆ. ಇದಕ್ಕೆ ಪೂರಕವಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಎಲ್ಲಾ ಸಹಕಾರಗಳನ್ನು ನೀಡುತ್ತಿದೆ. ಚಿಕ್ಕಬಳ್ಳಾಪುರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದು ನನ್ನ ಧ್ಯೇಯ. ಅದಕ್ಕಾಗಿ ನಾನು ಬದ್ಧನಾಗಿದ್ದೇನೆ ಹಾಗೂ ನಿಮ್ಮೆಲ್ಲರ ಸಹಕಾರವನ್ನು ಕೋರುತ್ತೇನೆ ಎಂದು ಸಚಿವ ಸುಧಾಕರ್ ಅವರು ಅಭಿಪ್ರಾಯಪಟ್ಟರು.

ಇದು ಕೇವಲ ಮೊದಲನೇ ವರ್ಷ, ಇನ್ನೂ ಆರಂಭ. ಕಳೆದ 1 ವರ್ಷದಲ್ಲಿ ನಮ್ಮ ಸರ್ಕಾರ ಎದುರಿಸಿರುವ ಸವಾಲು, ಸಮಸ್ಯೆ ಹಾಗೂ ಆತಂಕಗಳ ನಡುವೆ, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಇದು ಕೇವಲ ಮೊದಲನೇ ವರ್ಷ, ಇನ್ನೂ ಆರಂಭ. ರಾಜ್ಯದಲ್ಲಿ ಬಿಜಿಪಿ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದ ಹಲವು ಸವಾಲುಗಳನ್ನು ಎದುರಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸುಮಾರು 6,000 ರೂ. ಕೋಟಿಗೂ ಹೆಚ್ಚು ನೆರವು ನೀಡುವ ಮೂಲಕ ಜನರ ಕೈಹಿಡಿದಿದೆ. ಎಂದು ಸಚಿವ ಸುಧಾಕರ್ ತಿಳಿಸಿದರು.

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ 4,000 ರೂ. ಹೆಚ್ಚುವರಿ ನೀಡುವ ಮೂಲಕ 50 ಲಕ್ಷ ರೈತರಿಗೆ ಅನುಕೂಲವಾಗುವ ಯೋಜನೆ ರೂಪಿಸಲಾಗಿದೆ. ಇದೇ ಮಾದರಿಯಲ್ಲಿ  ನೇಕಾರರಿಗೂ ಯೋಜನೆ ರೂಪಿಸಲಾಗಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರಿಗೆ ತಮ್ಮ ಬೆಳೆಯನ್ನು ಗರಿಷ್ಠ ಬೆಲೆಗೆ ಮಾರುವ ಹಕ್ಕು ನೀಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ 2272 ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸುವ ಮೂಲಕ ಅಸಂಘಟಿತ ವಲಯದ ಕಾರ್ಮಿಕರು, ಆಟೋ-ಟ್ಯಾಕ್ಸಿ ಚಾಲಕರು, ಕ್ಷೌರಿಕರು, ಮಡಿವಾಳರು, ಹೂವು, ಹಣ್ಣು, ತರಕಾರಿ ಬೆಳೆಗಾರರಾಗಿ ನೆರವು ನೀಡಲಾಗಿದೆ. ರೈತರು ಮತ್ತು ಉದ್ಯಮಗಳಿಗೆ ಅನುಕೂಲ ಕಲ್ಪಿಸಲು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಬಂಡವಾಳ ಆಕರ್ಷಿಸಲು ಮತ್ತು ಉದ್ಯಮಗಳಿಗೆ ಉತ್ತೇಜನ ನೀಡಲು ಹೊಸ ಕೈಗಾರಿಕಾ ನೀತಿ ರೂಪಿಸಲಾಗಿದೆ.   ಕೋವಿಡ್ ನಿಯಂತ್ರಣದಲ್ಲಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಪರಿಸ್ಥಿತಿ ಉತ್ತಮವಾಗಿದೆ. ಹಲವು ಸವಾಲುಗಳ ನಡೆವುಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಸುಧಾಕರ್ ತಿಳಿಸಿದರು.

ಆತಂಕ ಮತ್ತು ಭಯದಿಂದ ಕೊರೋನಾ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ದೈರ್ಯದಿಂದ ಮತ್ತು ಆತ್ಮಸ್ಥೈರ್ಯದಿಂದ ಕೊರೋನಾ ನಿರ್ಮೂಲನೆ ಸಾಧ್ಯ. ಜನತೆ ಎಲ್ಲರು ಸುರಕ್ಷತೆಗಾಗಿ ಸರ್ಕಾರ ತಿಳಿಸಿರುವ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕೊರೋನಾ ನಿರ್ವಹಣೆಗೆ ನಮ್ಮೊಂದಿಗೆ ಕೈಜೋಡಿಸಿ. ಎಂದು ಸಚಿವ ಸುಧಾಕರ್ ತಿಳಿಸಿದರು.

ಕಳೆದ 1 ವರ್ಷದಲ್ಲಿ ಚಿಕ್ಕಬಳ್ಳಾಪುರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳ ಕೆಲವು ಮುಖ್ಯಾಂಶಗಳು ಇಲ್ಲಿದೆ….goal-government-develop-disruptions-corona-minister-dr-k-sudhakar

ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, 720 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ *

ಹೆಚ್.ಎನ್.ವ್ಯಾಲಿ ಯೋಜನೆ: ದಶಕಗಳಿಂದ ಬರಕ್ಕೆ ತುತ್ತಾಗಿರುವ ಜಿಲ್ಲೆಗೆ ಜೀವಜಲ ತರುವ ನಿಟ್ಟಿನಲ್ಲಿ ಹೆಚ್.ಎನ್.ವ್ಯಾಲಿ ಯೋಜನೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ.  ಯೋಜನೆಯ ನೀರು ಜಿಲ್ಲೆಯ ಅನೇಕ ಕೆರೆಗಳಿಗೆ ಹರಿಸಲಾಗಿದ್ದು ಅಂತರ್ಜಲ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದ್ದು ಹಲವು ಯೋಜನೆಗಳು ಈಗಾಗಲೇ ಅನುಷ್ಠಾನಗೊಂಡಿವೆ.

ನೂತನ ನ್ಯಾಯಲಯ ಸಂಕೀರ್ಣ: ಚಿಕ್ಕಬಳ್ಳಾಪುರದ ಜಿಲ್ಲಾ ನ್ಯಾಯಾಲಯಗಳನ್ನು ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗಿದ್ದು ಈಗಾಗಲೇ ಉದ್ಘಾಟನೆಯಾಗಿದೆ.

ತಿಪ್ಪೇನಹಳ್ಳಿ ಗ್ರಾಮದಲ್ಲಿ ನೂತನ ಗ್ರಾಮಪಂಚಾಯಿತಿ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ.

ರಾಜ್ಯದಲ್ಲಿ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷಿ ಅಂತರ್ಜಲ ಚೇತನ ಯೋಜನೆಗೆ ನಮ್ಮ ಜಿಲ್ಲೆಯಿಂದಲೇ ಚಾಲನೆ ನೀಡಲಾಗಿದೆ.

142 ಕಲ್ಯಾಣಿಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗಿದೆ.

ದೇಶದಲ್ಲೇ ಪ್ರಥಮ ಎನ್ನಬಹುದಾದ Biosafety Level-2 ಸುರಕ್ಷತೆ ಹೊಂದಿರುವ ಸುಸಜ್ಜಿತ ಕೋವಿಡ್ ಪರೀಕ್ಷಾ ಪ್ರಯೋಗಾಲಯ ನಮ್ಮ ಚಿಕ್ಕಬಳ್ಳಾಪುರದಲ್ಲಿ ಸ್ಥಾಪಿಸಲಾಗಿದೆ.

10 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ಆಯುಷ್ ಆಸ್ಪತ್ರೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ.

ಕುಡಿಯುವ ನೀರಿಗೆ ಸಮಗ್ರ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕಂದವಾರ ಕೆರೆಗೆ ಕಾಯಕಲ್ಪ ರೂಪಿಸಿ ಸುಂದರ ಕೆರೆಯನ್ನಾಗಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಪ್ರತ್ಯೇಕ ಡೈರಿ ಸ್ಥಾಪನೆಗೆ ಕ್ರಮ. ಶೀಘ್ರದಲ್ಲೇ ಅನುಷ್ಠಾನ

ಜಿಲ್ಲೆಯಲ್ಲಿ ಅಂತರ್ಜಲ ಚೇತನ ಯೊಜನೆಯಡಿ 133.66ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಯೋಜನೆಯಡಿ ನದಿ ಪುನಶ್ಚೇತನ, ಜಲಾನಯನ ಅಭಿವೃದ್ಧಿ ಹಾಗೂ ಜಲಸಂರಕ್ಷಣೆಯ ಯೋಜನೆಗಳು ಸೇರಿವೆ.

ಉತ್ತರ ಪಿನಾಕಿನಿ ನದಿಯ 1377 ಚ.ಕಿ ಪ್ರದೇಶದ 52 ಕಿರು ಜಲಾನಯನ ಪ್ರದೇಶದ ಅಭಿವೃದ್ಧಿಗೆ ಅನುಷ್ಠಾನಗೊಳಿಸಲಾಗುತ್ತಿದೆ.

ಮನ್ರೇಗಾ ಅಡಿಯಲ್ಲಿ ಜಿಲ್ಲೆಯಲ್ಲಿ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ಪಶುಗಳಿಗಾಗಿ ಶೆಡ್ ನಿರ್ಮಾಣ, ಕೊಳವೆಬಾವಿ ರೀಚಾರ್ಜ್ ಪಿಟ್ ನಿರ್ಮಾಣ, ರೇಷ್ಮೆ ಕಾಮಗಾರಿ, ಕೆರೆ ಹೂಳೆತ್ತುವುದು, ಕೃಷಿ ಜಮೀನು ಅಭಿವೃದ್ಧಿ, ಆಟದ ಮೈದಾನಗಳು, ಅಂಗನವಾಡಿ ಕಟ್ಟಡಗಳು, ಗೋದಾಮುಗಳು ಸೇರಿದಂತೆ ಅನೇಕ ಯೋಜನೆಗಳು ಸೇರಿವೆ.

ಸ್ವಚ್ಛಭಾರತ, ಸ್ವಸ್ಥ ಭಾರತ ಯೋಜನೆಯಡಿ ಜಿಲ್ಲೆಯಲ್ಲಿ 64 ಸಮುದಾಯ ಶೌಚಾಲಯಗಳ ನಿರ್ಮಾಣ ಮಾಡಲಾಗಿದೆ.

20 ಶಾಲಾ ಶೌಚಾಲಯಗಳನ್ನು ನಿರ್ಮಿಸಲಾಗಿದೆ. 32 ಗ್ರಾಮ ಪಂಚಾಯಿತಿಗಳಲ್ಲಿ ಸಮುದಾಯ ಶೌಚಾಲಯ ನಿರ್ಮಿಸಲಾಗಿದೆ.

130 ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಘನ ತ್ಯಾಜ್ಯ ನಿರ್ವಹಣೆಗಾಗಿ 157 ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಜಿಲ್ಲೆಯಲ್ಲಿ 27 ಗ್ರಾಮಗಳಿಗೆ ತಲಾ 1 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ ಮಾದರಿ ಗ್ರಾಮವನ್ನಾಗಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ.

ಕಳೆದ 1 ವರ್ಷದಲ್ಲಿ ಜಿಲ್ಲೆಯಲ್ಲಿ ವಸತಿ ಯೋಜನೆಯಡಿ 2998 ಮನೆಗಳನ್ನು ನಿರ್ಮಿಸಲಾಗಿದೆ.

185 ಚೆಕ್ ಡ್ಯಾಂ, 2546 ಕೃಷಿ ಹೊಂಡಗಳು, 55 ಕಟ್ಟೆಗಳು, 861 ಮಳೆ ನೀರು ಸಂರಕ್ಷಣಾ ಘಟಕಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲೆಯ ಎಲ್ಲಾ 157 ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಮಳೆ ನೀರು ಸಂರಕ್ಷಣಾ ಘಟಕಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ

ಚಿಕ್ಕಬಳ್ಳಾಪುರದಲ್ಲಿ ದೇಶದಲ್ಲೇ ಪ್ರಥಮ ಎರಡನೇ ಹಂತದ ಸುರಕ್ಷತಾ ವ್ಯವಸ್ಥೆ ಇರುವ ಸುಸಜ್ಜಿತ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗಿದೆ.

ಕೋವಿಡ್ ನಿರ್ವಹಣೆಗಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಸಿಬ್ಬಂದಿಗಳ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ವಲಸಿಗರಿಗೆ ನರೇಗ ಯೋಜನೆಯಡಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು ಕೋವಿಡ್ ಸಮಯದಲ್ಲೂ ಜೀವನ ನಿರ್ವಹಣೆಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ.

ಹಾಸ್ಟೆಲ್ ಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಲಕ್ಷಣರಹಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೂತ್ ಮಟ್ಟದ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸೋಂಕಿತರ ಮತ್ತು ಸಂಪರ್ಕಿತರ ಪತ್ತೆ ಕಾರ್ಯ ಸುಗಮವಾಗಿದೆ.

ಬೊಂಬೆಯಾಟಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕೊರೋನ ಜಾಗೃತಿ ಮೂಡಿಸಲಾಗುತ್ತಿದೆ.

ಎಲ್ಲಾ ಗ್ರಾಮಗಳಲ್ಲಿ ನೀರಿನ ಟ್ಯಾಂಕ್ ಗಳು ಪಶುಗಳು ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.

ಗ್ರಾಮಗಳ ಎಲ್ಲಾ ಭಾಗಗಳಲ್ಲೂ ಫ್ಯೂಮಿಗೇಶನ್/ಸ್ಯಾನಿಟೈಸ್ ಮಾಡಲಾಗಿದೆ.

ರಂಗೋಲಿಗಳ ಮೂಲಕ, ಬ್ಯಾನರ್ ಗಳ ಮೂಲಕ, ಮನೆಮನೆಗೆ ತೆರಳುವ ಮೂಲಕ ಅನೇಕ ವಿಧದಲ್ಲಿ ಮೂಲಕ ಜಿಲ್ಲೆಯಲ್ಲಿ ಕೊರೋನ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ.

ಆಶಾ ಕಾರ್ಯುಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿದೆ.

ಆನ್‌ಲೈನ್ ನಲ್ಲಿ ಜ಼ೂಮ್ ಮೂಲಕ ಸಭೆಗಳನ್ನು ನಡೆಸಿ ಕೊರೋನ ನಿರ್ವಹಣೆಯ ಪರಿಶೀಲನೆ ನಡೆಸಲಾಗುತ್ತಿದೆ.

ವಲಸಿಗರಿಗೆ ಉಚಿತ ಹೆಲ್ತ್ ಚೆಕಪ್ ನಡೆಸಿ ಮಾನಿಟರ್ ಮಾಡಲಾಗುತ್ತಿದೆ.

Key words: goal -government – develop – disruptions – corona-Minister -Dr. K. Sudhakar.