ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್…

ನವದೆಹಲಿ,ಫೆ,1,2020(www.justkannada.in):  ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. 6 ಲಕ್ಷ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಆಹ್ವಾನ 6 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತದೆ.  ಭಾರತ್ ನೆಟ್ ಯೋಜನೆಗೆ 2021 ಆರ್ಥಿಕ ವರ್ಷದಲ್ಲಿ 06 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ ಮಾಡಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲೂ ಇನ್ನು ಮಂದೆ ಇಂಟರ್ನೆಟ್ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.

ಎರಡು ರಾಷ್ಟ್ರೀಯ ವಿಜ್ಞಾನ ಯೋಜನೆಗಳಿಗೆ ಅನುದಾನ. ಖಾಸಗಿ ವಲಯದವರಿಗೆ ಡಾಟಾ ಸೆಂಟರ್ ಪಾರ್ಕ್ ನಿರ್ಮಿಸಲು ತೀರ್ಮಾನಿಸಲಾಗಿದೆ. ಗರ್ಭಿಣಿಯರ ಮರಣ ಪ್ರಮಾಣ ತಡೆಗೆ ಹೊಸ ಟಾಸ್ಕ್ ಫೋರ್ಸ್ ಸ್ಥಾಪನೆ. ಪೌಷ್ಠಿಕಾಂಶ ಪೂರಕ ಯೋಜನೆಗಳಿಗಾಗಿ 35,600 ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 28,600 ಕೋಟಿ ರೂಪಾಯಿಗಳ ಅನುದಾನ ನೀಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

Key words: Good news -Anganwadi workers – Union Budget.