ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಬಸ್ ಪಾಸ್

ಬೆಂಗಳೂರು,ಮಾರ್ಚ್,4,2022(www.justkannada.in):  ಕಟ್ಟಡ ಕಾರ್ಮಿಕರಿಗೆ  ರಾಜ್ಯ ಬಜೆಟ್ ನಲ್ಲಿ ಸಿಹಿಸುದ್ದಿ ನೀಡಲಾಗಿದ್ದು,   ರಿಯಾಯಿತಿ ದರದಲ್ಲಿ ಬಸ್​ ಪಾಸ್​ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇರಿಸಲಾಗಿದೆ. ಇದರ ಜತೆಗೆ ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ ಮತ್ತು ದಾವಣಗೆರೆ ಇಎಸ್​ಐ ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Key words: Good news – building –workers-budget