ಗುಡ್ ನ್ಯೂಸ್: ಕೋವಿಡ್ ಸಾವಿನ ಸಂಖ್ಯೆ ಇಳಿಕೆ, ಗುಣಮುಖರಾಗುತ್ತಿರುವವ ಸಂಖ್ಯೆ ಹೆಚ್ಚಳ

Promotion

ನವದೆಹಲಿ, ಅಕ್ಟೋಬರ್ 19, 2020 (www.justkannada.in): ಕೊರೊನಾ ಆತಂಕದ ದಿನಗಳಲ್ಲಿ ಕೊಂಚ ನೆಮ್ಮದಿ ಸುದ್ದಿಯೊಂದು ಹೊರ ಬಿದ್ದಿದೆ.

ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆ. 66,63,608 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಹೌದು. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,722 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 75,50,273ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 579 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,14,610ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 7,72,055 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 66,63,608 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 8,59,786 ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 9,50,83,976 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.