ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ…

ಬೆಂಗಳೂರು,ಅಕ್ಟೋಬರ್,21,2020(www.justkannada.in):  ರಾಜ್ಯದಲ್ಲಿ ಮಳೆ ಪ್ರವಾಹದಿಂದಾಗಿ ಹಲವು ಜನರು ಸಂಕಷ್ಟಕ್ಕೆ ಸಿಲುಕಿದ್ದು ಇದೀಗ ರಾಜ್ಯ ಸರ್ಕಾರ ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸಿದೆ. ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪರಿಹಾರದ ಮೊತ್ತ ಹೆಚ್ಚಿಸಿ ಆದೇಶ ಹೊರಡಿಸಿದೆ.jk-logo-justkannada-logo

ಪ್ರವಾಹದಿಂದ  ಮನೆ ಕಳೆದುಕೊಂಡರೇ 5 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಆಗಸ್ಟ್ ನಿಂದಲೇ ಅನ್ವಯವಾಗುವಂತೆ ಪರಿಹಾರ ಮೊತ್ತದ ಪರಿಷ್ಕರಣೆಗೆ ಆದೇಶ ಹೊರಡಿಸಲಾಗಿದೆ.

ಪ್ರವಾಹದಲ್ಲಿ ಶೇ.75 ಕ್ಕಿಂತ ಹೆಚ್ಚು ಭಾಗ ಹಾನಿಯಾಗಿದ್ದರೆ ಅಥವಾ ಸಂಪೂರ್ಣ ಮನೆ ಕುಸಿದು ಹೋಗಿದ್ದರೆ 5 ಲಕ್ಷ ರೂ. ಪರಿಹಾರ ಶೇ. 25 ರಿಂದ 75 ರಷ್ಟು ಭಾಗಶಃ ಹಾನಿಯಾದ ಮನೆ ದುರಸ್ತಿ ಮಾಡಲು 3 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.good-news-flood-victims-state-government-increased-amount-compensation

ಇನ್ನು ಶೇ.15ರಿಂದ 25 ರಷ್ಟು ಮನೆ ಹಾನಿಯಾದರೇ 50 ಸಾವಿರ ರೂ ಪರಿಹಾರ ನೀಡುವುದಾಗಿ ಸರ್ಕಾರ ತಿಳಿಸಿದೆ. ಇನ್ನು ಪ್ರವಾಹದಿಂದ ಬಟ್ಟ ಬರೆ ಸೇರಿದಂತೆ ದಿನಬಳಕೆಯ ವಸ್ತುಗಳಿಗೆ ಒಟ್ಟು 10 ಸಾವಿರ ರೂ.ಗಳನ್ನು ಪ್ರತಿ ಕುಟುಂಬಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

Key words: Good news –flood victims-state government -increased – amount -compensation ..