ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ !

Promotion

ಬೆಂಗಳೂರು, ಡಿಸೆಂಬರ್ 12, 2021 (www.justkannada.in): ಡಿ.16 ರಿಂದ ನಡೆಯಲಿರುವ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್ ಬಿ ವೃಂದದ ಬೆಂಗಳೂರು ಹಾಗೂ ಮೈಸೂರು ವಿಭಾಗದ ವರ್ಗಾವಣಾ ಕೌನ್ಸೆಲಿಂಗ್ ಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಹಿಂದೆ ಬೆಂಗಳೂರು ಮತ್ತು ಮೈಸೂರು ವಿಭಾಗಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬೆಂಗಳೂರು ಆಯುಕ್ತಾಲಯದ ಕಚೇರಿಯಲ್ಲಿ ಅಭ್ಯರ್ಥಿಗಳು ಕೌನ್ಸೆಲಿಂಗ್ ಗೆ ಹಾಜರಾಗಬೇಕಿತ್ತು.

ಆದರೆ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರೀಕೃತ ಮಾದರಿಯಲ್ಲಿ ಆಯಾ ಜಿಲ್ಲೆಗೆ ಸಂಬಂಧಪಟ್ಟ ಅಭ್ಯರ್ಥಿಗಳು ಒಂದೇ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಹಾಜರಾಗಲು ಸೂಚನೆ ನೀಡಿದೆ.

ಆಯಾ ಜಿಲ್ಲೆಯ ಉಪ ನಿರ್ದೇಶಕರು ವ್ಯಾಪ್ತಿಯ ಎಲ್ಲಾ ಮುಖ್ಯ ಶಿಕ್ಷಕರ/ತತ್ಸಮಾನ ಗ್ರೂಪ್ ಬಿ ವೃಂದದ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.