ಸಿನಿಪ್ರಿಯರಿಗೆ ಗುಡ್ ನ್ಯೂಸ್: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಭರ್ತಿಗೆ ಗ್ರೀನ್ ಸಿಗ್ನಲ್.

ಬೆಂಗಳೂರು,ಸೆಪ್ಟಂಬರ್,24,2021(www.justkannada.in):  ಕೊರೋನಾದಿಂದಾಗಿ ಸಿನಿಮಾ ವೀಕ್ಷಣೆಗಾಗಿ ಹಲವು ದಿನಗಳಿಂದ ಕಾದು ಕುಳಿತಿದ್ದ ಸಿನಿಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಭರ್ತಿಗೆ ಅವಕಾಶ ನೀಡಲಾಗಿದೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೊರೋನಾ ನಿಯಂತ್ರಣ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಕ್ಟೋಬರ್ 1 ರಿಂದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಕೊರೋನಾ ಪಾಸಿಟಿವಿಟಿ ರೇಟ್ ಶೇ.1 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಅವಕಾಶ ನೀಡಲಾಗುತ್ತದೆ. ಇನ್ನು  ಸಿನಿಮಾ ಥಿಯೇಟರ್ ಹಾಗೂ ಪಬ್ ಗಳ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ ಎಂದು ತಿಳಿಸಿದರು.

ಅಕ್ಟೋನರ್ 3 ರಿಂದ ಪಬ್ ಗಳಲ್ಲೂ ನಿರ್ಬಂಧ ತೆರವು. ಮಾಡಲಾಗುತ್ತದೆ. ನೈಟ್ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರುಲಿದೆ ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

Key words: Good news –  Green signal – 100 per cent-fill – theatres- CM –basavaraja bommai