ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 10 ಲಕ್ಷ ಹುದ್ದೆಗಳ ಭರ್ತಿಗೆ ಪ್ರಧಾನಿ ಮೋದಿ ಸೂಚನೆ.

Promotion

ನವದೆಹಲಿ,ಜೂನ್,14,2022(www.justkannada.in): ಉದ್ಯೋಗಾಕಾಂಕ್ಷಿಗಳಿಗೆ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 10 ಲಕ್ಷ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ.

ಇತ್ತೀಚೆಗೆ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ  ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿ  ಮುಂದಿನ 18 ತಿಂಗಳಿನಲ್ಲಿ ಕೇಂದ್ರದ ವಿವಿಧ ಇಲಾಖೆಗಳಲ್ಲಿ 10 ಲಕ್ಷ ಹುದ್ಧೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರಧಾನಿ ಕಾರ್ಯಾಲಯದಿಂದ  ಅಧಿಕೃತ ಮಾಹಿತಿ ಹೊರ ಬಿದ್ದಿದೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಮಾಹಿತಿಯನ್ನು ಟ್ವೀಟ್ ನಲ್ಲಿ ನೀಡಿದೆ. ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ಪ್ರಧಾನಿ ಕಚೇರಿಯ ಟ್ವೀಟ್ ನಲ್ಲಿ  ತಿಳಿಸಿದೆ.

Key words: Good news -job seekers-PM Modi-instructs – fill -10 lakh- posts

ENGLISH SUMMARY…

Good news for job aspirants: PM orders filling up of 10 lakh vacancies
New Delhi, June 14, 2022 (www.justkannada.in): The Union Government has given good news for job aspirants by instructing them to fill up 10 lakh vacancies.
In a meeting of various government departments and secretariats, Prime Minister Narendra Modi is said to have mobilized information about the available vacancies and has given instructions to fill up 10 lakh vacancies that are existing in various government departments across the state, in the next 18 months.
The Office of the Prime Minister has given this information in one of its tweets. “Prime Minister Modi’s government has taken a huge stride in providing employment opportunities to the youth. Accordingly, 10 lakh vacancies will be filled up in the next one and a half years,” the tweet read.
Keywords: Union Government/ 10 lakh jobs/ Prime Minister Narendra Modi