ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್….

Promotion

ಬೆಂಗಳೂರು,ಮೇ,,14,2021(www.justkannada.in): ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬಿಪಿಎಲ್ ಕಾರ್ಡುದಾರರಿಗೆ ನೀಡುತ್ತಿದ್ದ ಅಕ್ಕಿಯ ಪ್ರಮಾಣವನ್ನು 5 ರಿಂದ 10 ಕೆಜಿಗೆ ಏರಿಕೆ ಮಾಡಿದೆ.jk

ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು, ಇಲಾಖೆಯಿಂದ ಪಡಿತರ ಚೀಟಿಯನ್ನು ವಿತರಿಸಲು ಪರಿಶೀಲನೆ ಹಂತದಲ್ಲಿ ಇದ್ದಲ್ಲಿ ಅಂತಹವರಿಗೆ ಮೇ ಮತ್ತು ಜೂನ್ ತಿಂಗಳಿಗೆ ಪ್ರತಿ ಮಾಹೆಗೆ ಬಿಪಿಎಲ್ ಅರ್ಜಿದಾರರಿಗೆ ಉಚಿತವಾಗಿ 10 ಕೆಜಿ ಮತ್ತು 10 ಕೆಜಿ (ಪ್ರತಿ ಕೆಜಿಗೆ ರೂ.15ರಂತೆ ಸಬ್ಸಿಡಿ ದರದಲ್ಲಿ) ಎಪಿಎಲ್ ಅರ್ಜಿದಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.Good news - state government –BPL card-holders

ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನಿಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ಹಾಗೂ ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಪಡಿತರ ಚೀಟಿಗೆ 35 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ  ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದ್ಧಾರೆ.

Key words: Good news – state government –BPL card-holders