ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ.

Promotion

ಬೆಂಗಳೂರು,ಅಕ್ಟೋಬರ್,7,2022(www.justkannada.in): ದಸರಾ ಹಬ್ಬದ ಬಳಿಕ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ಧಿ ನೀಡಿದ್ದು, ತುಟ್ಟಿಭತ್ಯೆ ಹೆಚ್ಚಳ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಹಂಚಿಕೊಂಡಿದ್ದಾರೆ.  ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿನಾಂಕ 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಲಾಗಿದೆ. ತುಟ್ಟಿಭತ್ಯೆ ಹೆಚ್ಚಿಸಿ ಸಿಎಂ ಬೊಮ್ಮಾಯಿ ಅನುಮೋದಿಸಿದ್ದಾರೆ.

ಇದಕ್ಕಾಗಿ ಸರ್ಕಾರಕ್ಕೆ  1,282.72 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ.

key words: Good news -state- government -employees-Increase-DA- 3.7%.