ಕಾಂಗ್ರೆಸ್ ಗೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಗುಡ್ ಬೈ.

Promotion

ನವದೆಹಲಿ,ಆಗಸ್ಟ್,26,2022(www.justkannada.in): ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಗುಡ್ ಬೈ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ಗುಲಾಂ ನಬಿ ಅಜಾದ್ ರಾಜೀನಾಮೆ ಸಲ್ಲಿಸಿದ್ದಾರೆ.  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕತ್ವದ ವಿರುದ್ಧ  ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್‌ ನ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಗುಲಾಂ ನಬಿ ಆಜಾದ್ ಅವರನ್ನು ನೇಮಿಸಲಾಗಿತ್ತು. ಆದರೆ ಕೆಲವೇ ಸಮಯದಲ್ಲಿ ಅವರು ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

Key words: Goodbye – senior –Congress- leader- Ghulam Nabi Azad.