ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ- ಸಿಎಂ ಬೊಮ್ಮಾಯಿ.

Promotion

ಶಿವಮೊಗ್ಗ,ನವೆಂಬರ್,25,2022(www.justkannada.in): ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಡಿವಿವಾದ ಸಂಬಂಧ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ. ಈಗಾಗಲೇ ಏನು ಮಾಡಬೇಕು ಅದನ್ನೆಲ್ಲಾ ರಾಜ್ಯ ಸರ್ಕಾರ ಮಾಡಿದೆ ಎಂದರು.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, 24 ಗಂಟೆಗಳಲ್ಲೇ ರಾಜ್ಯ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಕರ್ನಾಟಕದ ಪೊಲೀಸರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದಗದು, ಯುಎಪಿಎ ಕಾಯ್ದೆ ದಾಖಲಾದ ಪ್ರಕರಣಗಳನ್ನು ಎನ್‌ ಐಎ ತನಿಖಾ ಸಂಸ್ಥೆಗಳಿಗೆ ವಹಿಸಬೇಕಾಗಿದೆ ಎಂದರು.

Key words: government – clear- stand – Maharashtra -border –dispute- CM Bommai.