ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಸರ್ಕಾರ….

ಬೆಂಗಳೂರು,ಆ,6,2020(www.justkannada.in): ರಾಜ್ಯದಲ್ಲಿ ಕೊಬ್ಬರಿ ಬೆಳೆಗಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಕೊಬ್ಬರಿ ಬೆಳೆಗೆ ಕೇಂದ್ರ ಸರ್ಕಾರ ನಿಗದಿ ಮಾಡಿರುವ 10,300 ರೂ ಬೆಂಬಲ ಬೆಲೆ ಜತೆಗೆ ಒಂದು ಸಾವಿರ ರೂ ಸೇರಿಸಿ 11,300 ರೂ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.jk-logo-justkannada-logo

ಈ ಕುರಿತು ಡಿಸಿಎಂ ಲಕ್ಷ್ಮಣ್ ಸವದಿ ಮಾಹಿತಿ ನೀಡಿದ್ದು  ಉಂಡೆ ಕೊಬ್ಬರಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಉಪಸಮಿತಿಯಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.government-coconut-growers-kobbari-rate

ಉಂಡೆ ಕೊಬ್ಬರಿಗೆ ಕ್ವಿಂಟಲ್‌ಗೆ ರೂ 10,300 ಮೊತ್ತ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ  ನಿಗದಿ ಮಾಡಿದೆ. ಇದರ ಜತೆಗೆ  ರಾಜ್ಯ ಸರ್ಕಾರ ಒಂದು ಸಾವಿರ ರೂ ಸೇರಿಸಿ 11,300 ರೂ ನೀಡಲು ನಿರ್ಧರಿಸಲಾಗಿದೆ. ರೈತರಿಂದ 11,300 ರೂಗಳಿಗೆ ಕೊಬ್ಬರಿ ಖರೀದಿಸಲಾಗುತ್ತದೆ.  ಇದರಿಂದ ರಾಜ್ಯದ ಬೊಕ್ಕಸಕ್ಕೆ 38 ಕೋಟಿ ಹೊರೆಯಾಗಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದರು.

Key words: government –coconut- growers –kobbari- rate