ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ: ಯಾವುದೇ ಆತಂಕ ಬೇಡ- ಸಿಎಂ ಬೊಮ್ಮಾಯಿ

Promotion

ಬೆಂಗಳೂರು,ಸೆಪ್ಟಂಬರ್,14,2022(www.justkannada.in): ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ. ಯಾವುದೇ ಆತಂಕ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಹಿಂದಿ ದಿವಸ್ ಆಚರಣೆಗೆ ವಿರೋಧ ಪಕ್ಷಗಳಿಂದ ವಿರೋಧ ಹಿನ್ನೆಲೆ ಈ ಕುರಿತು ಸದನದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ. ಯಾವುದೇ ಆತಂಕ ಬೇಡ. ನೆಲ,ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ . ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು ತರುತ್ತೇವೆ . ಇದೇ ಅಧೀವೇಶನದಲ್ಲಿ ಹೊಸ ಕಾನೂನು ಜಾರಿ ಮಾಡುತ್ತೇವೆ.  ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.

Key words: Government – committed – protect- Kannada-CM Bommai