ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ- ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ…

ಮೈಸೂರು,ಆ,14,2020(www.justkannada.in): ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಯಾರೊಬ್ಬರೂ ಇಲ್ಲದಂತಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.jk-logo-justkannada-logo

ನಗರದ ಹಾರ್ಡಿಂಜ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಸರ್ಕಾರ ಕೊರೊನಾ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಯಾರೊಬ್ಬರೂ ಇಲ್ಲದಂತಾಗಿದೆ. ಕಳೆದ ವರ್ಷದ ಪ್ರವಾಹ ಸಂತ್ರಸ್ತರಿಗೇ ಇದುವರೆಗೂ ಪರಿಹಾರ ನೀಡಿಲ್ಲ. ಈ ಬಾರಿಯೂ ಕೂಡ ಪ್ರವಾಹದಿಂದ ಬಹುತೇಕ ರಾಜ್ಯ ನೀರಿನಲ್ಲಿ ಮುಳುಗಿದೆ. ಆದ್ದರಿಂದ ಕೂಡಲೇ ಪ್ರಧಾನಿಯವರು ಕರ್ನಾಟಕಕ್ಕೆ ಬರಬೇಕು. ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಕನಿಷ್ಠ 25 ಸಾವಿರ ಕೋಟಿ ಪರಿಹಾರ ನೀಡಬೇಕೆಂದು  ಆಗ್ರಹಿಸಿದರು.

ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಪೊಲೀಸರು ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಈ ಗಲಭೆ ನಡೆಯುತ್ತಿರಲಿಲ್ಲ. ಗುಪ್ತಚರ ದಳ ಎಚ್ಚರಿಕೆ ವಹಿಸಿದ್ದರೆ ಈ ಅನಾಹುತ ತಡೆಯಬಹುದಿತ್ತು. ಎಲ್ಲರೂ ಶಾಂತಿಯನ್ನು ಕಾಪಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲರೂ ಶಾಂತಿ ಕಾಪಾಡಬೇಕು, ಬೆಂಗಳೂರು ನಗರದಲ್ಲಿ ಶಾಂತಿ ಉಳಿಯಬೇಕು. ಯಾವುದೇ ಕೋಮಿನ ಜನರು ದ್ವೇಷ, ಅಸೂಯೆಗಳಿಂದ ಬೀದಿಗೆ ಇಳಿಯಬಾರದೆಂದು ಮನವಿ ಮಾಡಿದರು.government-complete-failure-management-corona-situation-vatal-nagaraj-protest-mysore

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಒಂದು ವೇಳೆ ಹಿಂದಿ ಭಾಷೆಯನ್ನು ಹೇರಿದ್ದಲ್ಲಿ ಅದರ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

Key words:  government -complete -failure – management – corona situation-Vatal Nagaraj-protest – Mysore.