ಸರಳ ಮತ್ತು ಗೌರವಪೂರ್ವಕವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ನಿರ್ಧಾರ.

Promotion

ಬೆಂಗಳೂರು,ಅಕ್ಟೋಬರ್,30,2021(www.justkannada.in):  ನವೆಂಬರ್ 1ರ ಕನ್ನಡ ರಾಜ್ಯೋತ್ಸವವನ್ನು ಸರಳ ಮತ್ತು ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಮುಖ್ಯಕಾರ್ಯದರ್ಶಿ ರವಿಕುಮಾರ್, 01.11.2021ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು.  ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮತ್ತು ಕೋವಿಡ್-19 ಸೋಂಕು ಪ್ರಸರಣೆಯನ್ನು, ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ  ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.

ಮಾರ್ಗಸೂಚಿ ಈ ಕೆಳಕಂಡಂತಿದೆ.

  1. ಕೋವಿಡ್-19 ಮೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ, ಪ್ರಸಕ್ತ ವರ್ಷದ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸುವುದು.

 

  1. ಕನ್ನಡ ರಾಜ್ಯೋತ್ಸವ ಸಮಾರಂಭದ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ ಅಂತರ, ಮಾಸ್ ಬಳಕ ಮತ್ತು ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸುವ ಷರತ್ತಿಗೆ ಒಳಪಟ್ಟು ಗರಿಷ್ಠ 500 ಜನರು ಸೇರಲು ಮಾತ್ರ ಅನುಮತಿಸಲಾಗಿದೆ.
  2. ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
  3. ರಾಜ್ಯೋತ್ಸವ ಆಚರಣೆಯು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಪೂರಕವಾಗಿರುವುದರಿಂದ ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.
  4. ರಾಜ್ಯದಲ್ಲಿನ ಸಂಘ-ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್ ಮಹಾನಗರ ಪಾಲಿಕೆ / ಸ್ಥಳೀಯ ಸಂಸ್ಥೆ / ವಿದ್ಯುತ್ ಇಲಾಖೆ / ಆರೋಗ್ಯ ಇಲಾಖೆ / ಅಗ್ನಿಶಾಮಕ ಇಲಾಖೆ / ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರ ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
  5. ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ / ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕನಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  6. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ರಾಜೋತ್ಸವದಲ್ಲಿ ಭಾಗವಹಿಸದಂತೆ ಎಚ್ಚರವಹಿಸುವುದು.
  7. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿ ಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
  8. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತ ಸಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

Key words: Government- decision – celebrate -Kannada Rajyotsava – simple – respectful