ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ.17 ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ.

ಬೆಂಗಳೂರು,ಮಾರ್ಚ್,1,2023(www.justkannada.in):  7ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ  ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ.17 ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.  ಈ ಆದೇಶ ಏಪ್ರಿಲ್ 1,2023ರಿಂದ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಮೂಲಕ ಸರ್ಕಾರಿ ನೌಕರರಿಗೆ ಗಿಫ್ಟ್ ನೀಡಲಾಗಿದ್ದು, ಇನ್ನಾದರೂ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಬಿಟ್ಟು ಸೇವೆಗೆ ವಾಪಸ್ ಆಗುತ್ತಾರಾ ಕಾದು ನೋಡಬೇಕಿದೆ.

Key words: government- employees- officially -ordered – 17 percent -increase – salary.