ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ

ಬೆಂಗಳೂರು, ಜನವರಿ 22, 2022 (www.justkannada.in): ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳುಗೆ ಸರ್ಕಾರಿ ಉದ್ಯೋಗ ನೀಡುದಾಗಿ ಸಿಎಂ ಬಸವರಾಜ ಈ ಹಿಂದೆ ಘೋಷಿಸಿದ್ದರು.

ಇದೀಗ ರಾಜ್ಯ ಸರ್ಕಾರವು ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ನೀಡುವ ಸಂಬಂಧ ಆದೇಶ ಹೊರಡಿಸಿದೆ.

ಒಲಿಂಪಿಕ್ಸ್ ಮತ್ತು ಪ್ಯಾರಾ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಎ ಸರ್ಕಾರಿ ಉದ್ಯೋಗ, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಬಿ ಗ್ರೂಪ್ ಹಾಗೂ ನ್ಯಾಷನಲ್ ಗೇಮ್ಸ್ ನಲ್ಲಿ ಪದಕ ವಿಜೇತರಿಗೆ ಸಿ ಗ್ರೂಪ್ ಉದ್ಯೋಗ, ಇದಕ್ಕಿಂತ ಕಡಿಮೆ ಕ್ರೀಡಾಕೂಟದ ಪದಕ ವಿಜೇತರಿಗೆ ಉದ್ಯೋಗ ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.