ಡ್ರಗ್ಸ್ ವಿರುದ್ಧ ಸರ್ಕಾರದ ಸಮರ: ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

Promotion

ಬೆಂಗಳೂರು,ಸೆಪ್ಟಂಬರ್ ,11,2020(www.justkannada.in):  ರಾಜ್ಯ ಸರ್ಕಾರ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.jk-logo-justkannada-logo

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಕರಣದಲ್ಲಿ ಯಾರ ಹೆಸರು ಬಂದ್ರೂ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಡ್ರಗ್ಸ್ ವಿರುದ್ಧ ಸರ್ಕಾರ ಸಮರ ಸಾರಿದೆ. ರಾಜ್ಯದೆಲ್ಲೆಡೆ ಡ್ರಗ್ಸ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದರು.government-war-against-drugs-home-minister-basavaraja-bommai

ಹಾಗೆಯೇ ನಿನ್ನೆ ಕಲ್ಬುರ್ಗಿಯಲ್ಲಿ 1350 ಕೆಜಿ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಡ್ರಗ್ಸ್ ಬಗ್ಗೆ ಮಾಹಿತಿ ಬಂದ್ರೆ ಪರಿಗಣಿಸಿ. ಮಾಧ್ಯಮಗಳಲ್ಲಿ ಸುದ್ಧಿ ಬಂದ್ರೂ ಪರಿಗಣಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Government-War -Against –Drugs- Home Minister- Basavaraja Bommai.