ಪೊಲೀಸರ ಕಲ್ಯಾಣಕ್ಕೆ ಸರ್ಕಾರ ಬದ್ದ : ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು,ಫೆಬ್ರವರಿ,08,2021(www.justkannada.in) : ಪೊಲೀಸರು ತಮ್ಮ ಕರ್ತವ್ಯದಲ್ಲಿ ದಕ್ಷ ಮತ್ತು ಪ್ರಾಮಾಣಿಕತೆ ತೋರಿದ್ದಾರೆ. ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಕಲ್ಯಾಣಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು.jk

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ನಕ್ಸಲ್ ನಿಗ್ರಹ, ಉಗ್ರರ ವಿರುದ್ಧ ಹೋರಾಟ ಸೇರಿದಂತೆ ಯಾವುದೇ ಬಿಕ್ಕಟ್ಟು ಎದುರಾದಾಗ ನೀವು ಪ್ರಾಣದ ಹಂಗನ್ನು ತೊರೆದು ಕೆಲಸ ಮಾಡಿದ್ದೀರಿ. ನಿಮ್ಮ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ಪೊಲೀಸ್ ಗೃಹ ಯೋಜನೆಯಲ್ಲಿ ಸುಮಾರು ಎರಡೂವರೆ ಸಾವಿರ ಕೋಟಿ ವೆಚ್ಚದಲ್ಲಿ 11 ಸಾವಿರ ಸುಸಜ್ಜಿತ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತಿದೆ. 2020-25ನೇ ಸಾಲಿನ ಗೃಹ ಯೋಜನೆಯನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ 2000 ಮನೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಏನೇ ಬೇಡಿಕೆಗಳಿದ್ದರೂ ಸರ್ಕಾರ ಈಡೇರಿಸಲು ಬದ್ದವಾಗಿದೆ ಎಂದು ಹೇಳಿದರು.

ಪ್ರಾಣದ ಹಂಗು ತೊರೆದು ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವವನ್ನೂ ಲೆಕ್ಕಿಸದೆ ಕೆಲಸ ಮಾಡಿರುವ ಪೊಲೀಸರ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಸಾಧಾರಣ ಸೇವೆ ಸಲ್ಲಿಸಿದವರನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕವನ್ನು ಪ್ರದಾನ ಮಾಡಲಾಗುತ್ತದೆ. ನಿಮ್ಮ ಈ ಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ತಿಳಿಸಿದರು.Government's,commitment,police,welfare,CM B.S. Yeddyurappa

ಈ ವೇಳೆ ಗೃಹಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

key words : Government’s-commitment-police-welfare-CM B.S. Yeddyurappa