ರಾಜ್ಯಪಾಲರು ಸಭೆ ಕರೆದಿರುವುದು ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಭಾಗವೇ..?  ರಾಜ್ಯ ಕಾಂಗ್ರೆಸ್ ಟೀಕೆ…

Promotion

ಬೆಂಗಳೂರು, ಏಪ್ರಿಲ್,20,2021(www.justkannada.in):  ರಾಜ್ಯದಲ್ಲಿ ಕೊರೋನಾ ನಿಯಂತ್ರಣ, ಕಠಿಣ ನಿಯಮಗಳ ಜಾರಿಗೆ ಇಂದು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಈ ಕುರಿತು ಟ್ವಿಟ್ಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಟೀಕಿಸಿದೆ. governor' -meeting-  part of -BSY-free BJP- campaign-State Congress

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಮರ್ಥ್ಯವೇ ಅಥವಾ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಬಾಗವೇ..? ಎಂದು ಲೇವಡಿ ಮಾಡಿದೆ.

ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದೆ. governor' -meeting-  part of -BSY-free BJP- campaign-State Congress

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಕೊರೋನಾ ನಿಯಂತ್ರಣ ಕುರಿತು ಚರ್ಚಿಸಲು ಸಂಜೆ 4.30ಕ್ಕೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ.

Key words:  governor’ -meeting-  part of -BSY-free BJP- campaign-State Congress