ಬೆಂಗಳೂರಿನಲ್ಲಿ ಗಲ್ಲಿ ಗಲ್ಲಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ- ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ.

ಬೆಂಗಳೂರು,ಸೆಪ್ಟಂಬರ್,3,2021(www.justkannada.in):  ಗೌರಿ ಗಣೇಶ ಹಬ್ಬ ಆಚರಣೆ ಬೆಂಗಳೂರು ನಗರದ ಗಲ್ಲಿಗಲ್ಲಿಯ ರಸ್ತೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಕಮಲ್ ಪಂತ್, ಸರ್ಕಾರದ ಮಾರ್ಗಸೂಚಿಗಳ ಅನ್ವಯ ಗಣೇಶ ಹಬ್ಬ ಆಚರಿಸಬೇಕು. ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಗಲ್ಲಿ ಗಲ್ಲಿಗಳಲ್ಲಿ ಗಣೇಶ ಮೂರ್ತಿ ಕೂರಿಸುವಂತಿಲ್ಲ  ಎಂದು  ಹೇಳಿದರು.

ಕೋರಮಂಗಲ ಕಾರು ಅಪಘಾತ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ  ಕಮಲ್ ಪಂತ್, ಕೋರಮಂಗಲ ಅಪಘಾತ ಪ್ರಕರಣದ ತನಿಖೆ ನಡೆಯುತ್ತಿದೆ. ವೈಜ್ಞಾನಿಕವಾಗಿ ಈ ಕುರಿತು ತನಿಖೆ ನಡೆಸಲಾಗುತ್ತಿದೆ. 7 ಜನ ಒಂದೇ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂದೆ ಈ ರೀತಿ ಆಗಬಾರದು. ಹಾಗಾಗಿ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದರು.

Key words: gowri ganesha festival-cannot – Galli galli – Bangalore-Police Commissioner- Kamal Pant