ಗ್ರಾಮ ಪಂಚಾಯತ್ ಚುನಾವಣೆ: ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಚುನಾವಣಾ ಆಯೋಗ…

ಬೆಂಗಳೂರು,ಸೆ,3,2020(www.justkananda.in):  ಕೊರೋನಾ ಮಹಾಮಾರಿ ಹೆಚ್ಚಾದ ಹಿನ್ನೆಲೆ  ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆಯಾಗುತ್ತಲೇ ಬಂದಿತ್ತು. ಇದೀಗ   ಗ್ರಾಮಪಂಚಾಯತ್ ಚುನಾವಣೆಗೆ ಅನುಸರಿಸಬೇಕಾದ ಮಾರ್ಗಸೂಚಿಯನ್ನ  ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.jk-logo-justkannada-logo

ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾರ್ಗಸೂಚಿ ನಿಯಮಗಳು ಈ ಕೆಳಕಂಡಂತಿದೆ…

ಚುನಾವಣೆಯಲ್ಲಿ ನಿರತರಾಗುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು.

ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕಚೇರಿಗಳ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ನಲ್ಲಿ ಕೈ ಶುಚಿಗೊಳಿಸಿಕೊಳ್ಳುವುದು. ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ.

ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.

ಚುನಾವಣಾ ಕಾರ್ಯಗಳನ್ನ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ನಡೆಸುವುದು.

ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ  ಫೇಸ್ ಮಾಸ್ಕ್ ಧರಿಸಬೇಕು.  ಕೈಗಳಿಗೆ ಗ್ಲೌಸ್  ಕಡ್ಡಾಯವಾಗಿ ಧರಿಸಬೇಕು.

ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಮತ್ತು ಒಬ್ಬ ಸೂಚಕನಿಗೆ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿರುತ್ತದೆ.  ಕೊರೋನಾ ಪಾಸಿಟಿವ್ ವ್ಯಕ್ತಿ  ನಾಮಪತ್ರ ಸಲ್ಲಿಸಲು ಇಚ್ಛಿಸಿದರೇ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು.

ನಾಮಪತ್ರ ಪರಿಶೀಲನೆ ವೇಳೆ ಕ್ಷೇತ್ರವಾರು ಹಾಜರಿರುವ ಅಭ್ಯರ್ಥಿಗಳ  ಸಮ್ಮುಖದಲ್ಲಿ ಮಾಡಬೇಕು.

ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಐದು ಮಂದಿಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿರುತ್ತದೆ. ಪ್ರಚಾರದ ವೇಳೆ ಫೇಸ್ ಮಾಸ್ಕ್ ಧರಿಸಬೇಕು.

ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನ ಹಂಚಬಹುದು. ಹಂಚುವಾಗ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು.

ಮತದಾನದ ದಿನ ಮತಗಟ್ಟೆ ಅಧಿಕಾರಿಗಳು ಫೇಸ್ ಮಾಸ್ಕ್ ಹ್ಯಾಂಡ್ ಗ್ಲೌಸ್ ಧರಿಸಬೇಕು.  ಮತದಾರರು ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು. ಮತದಾನ ಕೊಠಡಿ ಪ್ರವೇಶಿಸುವ ವೇಳೆ ಕೋವಿಡ್ ಥರ್ಮಲ್ ಜ್ವರ ತಪಾಸಣೆ ಕಡ್ಡಾಯ.

Key words: Gram Panchayat –Election-State Election Commission- issued -guidelines