ಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ನಿಧನ: ಎಚ್ಡಿಕೆ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ

Promotion

ಬೆಂಗಳೂರು, ಮೇ 15, 2022 (www.justkannada.in):  ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಮೊಮ್ಮಗಳು ಸಾವನ್ನಪ್ಪಿದ್ದಾಳೆ.

ಜಿ. ಟಿ. ದೇವೇಗೌಡರ ಪುತ್ರ ಜಿ. ಡಿ. ಹರೀಶ್ ಗೌಡ ಪುತ್ರಿ ಗೌರಿ (3) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಶನಿವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಗು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಗೌರಿ ನಿಧನಕ್ಕೆ ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ‘ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು.

ಮುದ್ದು ಕಂದ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ’ ಎಂದು ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.