ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್.  

kannada t-shirts

ಬೆಂಗಳೂರು,ಮೇ,12,2022(www.justkannada.in): ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.

ಇಂದು ಸಿಎಂ  ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.  ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಮ್ಮತಿ ಸೂಚಿಸಲಾಗಿದೆ.

ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು, ಪರಿಷತ್ ನಲ್ಲಿ ಅಂಗೀಕಾರಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರೋದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.covid-dead-body-cancels-license-order-state-government

ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರೋದಾಗಿ ಘೋಷಣೆ ಮಾಡಿದ್ದರು. ಇನ್ನು ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆಯೂ  ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಮೀಸಲಾತಿ ವಿಚಾರವಾಗಿ ಕೋರ್ಟ್ ಮೊರೆ ಹೋಗಲು ಸರ್ಕಾರ ತೀರ್ಮಾನಿಸಿದೆ.

Key words: Green signal – Cabinet-meeting- implement- prohibition –conversion

website developers in mysore