ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್…?

Promotion

ನವದೆಹಲಿ,ಮಾರ್ಚ್,17,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಇಂದು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ.

ಈ ನಡುವೆ  ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ದ ಸ್ಪರ್ಧೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೆಲ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ  ಒಪ್ಪಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Green signal –contest-between- CM -Vinay Kulkarni -Shiggavi constituency