ಪದಗ್ರಹಣ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್: ಸಿಎಂ ಬಿಎಸ್ ವೈಗೆ ಧನ್ಯವಾದ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್….

green-signal-kpcc-president-program-dk-shivakumar-cm-bs-yeddyuarappa
Promotion

ಬೆಂಗಳೂರು,ಜೂ,11,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅನುಮತಿ ನೀಡಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಹಿನ್ನೆಲೆ ಸಿಎಂ ಬಿಎಸ್ ವೈಗೆ  ಡಿ.ಕೆ ಶಿವಕುಮಾರ್ ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.green-signal-kpcc-president-program-dk-shivakumar-cm-bs-yeddyuarappa

ಈ ಹಿಂದೆ ಲಾಕ್ ಡೌನ್ ನಿಯಮದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು. ಈಗಾಗಲೇ ಎರಡು ಬಾರಿ ಡಿಕೆಶಿ ಪದಗ್ರಹಣ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಇದೀಗ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕ ಹಿನ್ನೆಲೆ ಪಕ್ಷದ ನಾಯಕರ ಜೊತೆ ಚರ್ಚಿಸಿ ಪದಗ್ರಹಣ ದಿನಾಂಕ ಘೋಷಣೆ ಮಾಡುವುದಾಗಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Green Signal –kpcc –president- Program-DK Shivakumar- CM –bs yeddyuarappa