ಮತ್ತೆ ಬಿಜೆಪಿ ಪರ ಬ್ಯಾಟಿಂಗ್: ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ ಎಂದ ಜಿ.ಟಿ ದೇವೇಗೌಡರು..

ಬೆಂಗಳೂರು,ಡಿ.14,2019(www.justkannada.in):  ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಹಾಕುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡರು ಮತ್ತೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಜಿ.ಟಿ ದೇವೇಗೌಡರು, ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನ ಕಣಕ್ಕಿಳಿಸದೆ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿಗೆ ಬೆಂಬಲ ನೀಡಬೇಕಿತ್ತು. ತಮಿಳುನಾಡಿನಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷದ ವಿರುದ್ದ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಇಲ್ಲಿಯೂ ಕೂಡ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸಬೇಕಿತ್ತು ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಅಭಿವೃದ್ದಿ  ಎಂದು ಹೇಳಿದ್ರು ಹೀಗಾಗಿ ಮತದಾರರು ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಮತ ಹಾಕಿದ್ದಾರೆ. ಅಭಿವೃದ್ದಿ ದೃಷ್ಟಿಯಿಂದ ವಿಪಕ್ಷಗಳು ಬಿಜೆಪಿಗೆ ಬೆಂಬಲ ನೀಡಬೇಕು. ಉಪಚುನಾವಣೆಯಲ್ಲಿ ಯಡಿಯೂರಪ್ಪ ಸ್ಪಷ್ಟ ಜನಾದೇಶ ಪಡೆದು ತಮ್ಮ ಸರ್ಕಾರಕ್ಕೆ ಬಹುಮತ ಪಡೆದುಕೊಂಡಿದ್ದಾರೆ. ರಾಜಕೀಯ ಅಸ್ಥಿರತೆ ಕೊನೆಗೊಂಡಿದ್ದು, ಇನ್ನು ಮುಂದಾದರೂ ಅಭಿವೃದ್ದಿ ಕಾರ್ಯಗಳು ನಡೆಯಬೇಕು ಎಂದು ಹೇಳಿದರು.

Key words: GT Deve Gowda – no need – JDS candidate – by-election.