ಗ್ಯಾರಂಟಿ ಯೋಜನೆ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ-ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

Promotion

ಚಿತ್ರದುರ್ಗ,ಜೂನ್,2,2023(www.justkannada.in): ಕಾಂಗ್ರೆಸ್​ ಗ್ಯಾರಂಟಿ ಯೋಜನೆಯೂ  ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆಯಾಗಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಮೂಳಕ ಜನರನ್ನು ಭಿಕ್ಷಾಟನೆ ಸರದಿಗೆ ನಿಲ್ಲಿಸಿ ಅಧಿಕಾರ ಪಡೆಯಲು ಷಡ್ಯಂತ್ರ ಮಾಡಲಾಗಿದೆ. ಕಾಂಗ್ರೆಸ್ ಸಿದ್ಧಾಂತವನ್ನು ಗಾಳಿಗೆ ತೂರಿ ಮತದಾರರಿಗೆ ಆಮಿಷ ಒಡ್ಡಿದೆ. ಕಾಂಗ್ರೆಸ್​ ನಿಂದ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೆಲಸ ನಡೆದಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಸಭೆ ಬಳಿಕ  ಗ್ಯಾರಂಟಿ ಯೋಜನೆಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ.

Key words:  guarantee -scheme – system – begging -Union Ministe-r A. Narayanaswamy