ಪಕ್ಷದಿಂದ ಉಚ್ಛಾಟನೆ ಮಾಡಿದ್ದು ನನಗೆ ಸಂತೋಷ ತಂದಿದೆ- ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್

Promotion

 

ತುಮಕೂರು,ಜೂನ್,23,2022(www.justkannada.in):   ಜೆಡಿಎಸ್ ವಿರುದ್ಧ ಬಂಡಾಯವೆದ್ದು ವಿಧಾನ ಪರಿಷತ್  ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಗುಬ್ಬಿ ಶಾಸಕ ಎಸ್.ಆರ್  ಶ್ರೀನಿವಾಸ್ ಮತ್ತು ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರನ್ನು ಉಚ್ಚಾಟನೆ ಮಾಡಿ ಜೆಡಿಎಸ್ ಆದೇಶ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗುಬ್ಬಿ ಜೆಡಿಎಸ್ ಶಾಸಕ ಎಸ್ಆರ್ ಶ್ರೀನಿವಾಸ್ ಜೆಡಿಎಸ್ ಉಚ್ಚಾಟನೆ ಮಾಡಿರುವುದರಲ್ಲಿ ಹೊಸದೇನಿಲ್ಲ. ಪಕ್ಷದಿಂದ ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ಅಲ್ಲದೆ ಈ ಬೆಳವಣಿಗೆ ಮುಜುಗರ, ಅವಮಾನ ಎಂದು ಅನಿಸಲ್ಲ. ನನ್ನ ವಿರುದ್ಧ ಅಭ್ಯರ್ಥಿ ಘೋಷಿಸಿದಾಗಲೇ ನಾನು ಉಚ್ಚಾಟಿತನಾಗಿದ್ದೆ. ಡಿಸೆಂಬರ್ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Key words: Gubbi-MLA-SR-shrinivas-jds