ತುಮಕೂರು ಘಟನೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ: ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ  ಮಾರ್ಗಸೂಚಿ ಪ್ರಕಟ.

ಬೆಂಗಳೂರು,ನವೆಂಬರ್,4,2022(www.justkannada.in):  ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ  ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ಇದೀಗ  ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಾರ್ಗಸೂಚಿಯಂತೆ ಇನ್ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್ ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳನ್ನ  ಕೇಳದೆ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದೆ.

ದಾಖಲೆ ಕೇಳದೆ ತುರ್ತು ಆರೋಗ್ಯ ಸೇವೆ ಒದಗಿಸಬೇಕು. ತಾಯಿ ಕಾರ್ಡ್ ಆಧಾರ್ ಕಾರ್ಡ್ ಪಡಿತರ ಚೀಟಿ  ಯಾವುದೇ ದಾಖಲೆ  ಕೇಳದೇ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ನೀಡಬೇಕು.  ಚಿಕಿತ್ಸೆ ನೀಡುವಾಗ ಆರ್ಥಿಕ ಪರಿಸ್ಥಿತಿ ನೋಡಬಾರದು.

ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ. ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು.

ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ. ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು.

ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ.

ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

Key words: Guidelines – all -government –hospitals-health department