ಪ್ರಧಾನಿ ಮೋದಿ ನಾಯಕತ್ವವನ್ನ ದೇಶದ ಜನ ಒಪ್ಪಿದ್ದಾರೆ- ಗುಜರಾತ್ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಡಿಸೆಂಬರ್,8,2022(www.justkannada.in):  ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಗೆಲುವು ಸಾಧಿಸಿರುವುದಕ್ಕೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗುಜರಾತ್ ನಲ್ಲಿ ಬಿಜೆಪಿ ಅಪೂತಪೂರ್ವ ಗೆಲುವು ಸಾಧಿಸಿದೆ. ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದು ಸುಲಭದ ಮಾತಲ್ಲ. ಕಳೆದ ಬಾರಿಗಿಂತಲೂ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ ಎಂದರು.

ಗುಜರಾತ್ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಪ್ರಧಾನಿ ಮೋದಿ ನಾಯಕತ್ವವನ್ನ ದೇಶದ ಜನ ಒಪ್ಪಿಕೊಂಡಿದ್ದಾರೆ.   ಹಿಮಾಚಲ ಪ್ರದೇಶದಲ್ಲಿ ಕ್ಲೋಸ್ ಫೈಟ್ ಇದೆ ಅಂತಿಮವಾಗಿ ಬಿಜೆಪಿ ಗೆಲ್ಲುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words:  Gujarat-election-modi- leadership -CM Basavaraj Bommai