ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

Promotion

ಬೆಂಗಳೂರು,ಡಿಸೆಂಬರ್,8,2022(www.justkannada.in):  ಗುಜರಾತ್ ನಲ್ಲಿ  ಬಿಜೆಪಿ ದಾಖಲೆ ಗೆಲುವು ಹಿನ್ನಲೆ ಅಲ್ಲಿನ ಫಲಿತಾಂಶ ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಿಕೆ ನೀಡಿದ ರಾಜ್ಯ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಳೆದ 5 ವರ್ಷದಿಂದ ಗುಜರಾತ್ ನಲ್ಲಿ ವಿರೋಧ ಪಕ್ಷವೇ ಇಲ್ಲ. ಆದ್ದರಿಂದ ಗುಜರಾತ್ ಫಲಿತಾಂಶ ಏನಾಗಲಿದೆ ಎಂಬುದು ಮೊದಲೇ ಎಲ್ಲರಿಗೊ ಗೊತ್ತಿರುವ ವಿಷಯವಾಗಿತ್ತು. ರಾಜ್ಯದ  ಸಿಎಂ ಗುಜರಾತ್ ಫಲಿತಾಂಶ  ಕರ್ನಾಟಕದ ಮೇಲೂ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಆದರೆ ಗುಜರಾತ್​ ನಲ್ಲಿರುವ ವಾತವಾರಣವೇ ಬೇರೆ, ರಾಜ್ಯದ ವಾತಾವರಣವೇ ಬೇರೆ. ಹೀಗಾಗಿ ಗುಜರಾತ್ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಮೊದಲಿನಿಂದಲೂ ಒಂದು ಬಾರಿ ಕಾಂಗ್ರೆಸ್ ಮತ್ತೊಂದು ಬಾರಿ ಬಿಜೆಪಿಗೆ ಅಧಿಕಾರ ಸಿಗುತ್ತದೆ. ಅದೇ ಈ ಬಾರಿಯೂ ಮರುಕಳಿಸಿದೆ ಎಂದು ಹೆಚ್.ಡಿಕೆ ಅಭಿಪ್ರಾಯ ವ್ಯಕ್ತಪಡಿಸಿದರು.

Key words: Gujarat –Election- Result- Former CM- H.D. Kumaraswamy