ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ- ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್.

Promotion

ಬೆಂಗಳೂರು,ಡಿಸೆಂಬರ್,8,2022(www.justkannada.in):  ಗುಜರಾತ್ ನಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ್ದು ಪ್ರಚಂಡ ಜಯ ಸಾಧಿಸುವತ್ತ ದಾಪುಗಾಲಿಟ್ಟಿದೆ. ಈ ನಡುವೆ ಈ ಫಲಿತಾಂಶ ಕುರಿತು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ದಿನೇಶ್ ಗುಂಡೂರಾವ್, ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ. 2013ರಲ್ಲಿ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆದರೆ ಕಾಂಗ್ರೆಸ್  ಕರ್ನಾಟಕದಲ್ಲಿ ಜಯ ಸಾಧಿಸಿತ್ತು. ರಾಜ್ಯ ರಾಜ್ಯಗಳ ನಡುವೆ ವಿಚಾರಗಳೇ ಬೇರೆ ಇರುತ್ತವೆ. ಹೀಗಾಗಿ  ಕರ್ನಾಟಕದ ಮೇಲೆ ಈ ಫಲಿತಾಂಶ ಪರಿಣಾಮ ಬೀರಲ್ಲ ಎಂದರು.

Key words: Gujarat-election-result-not-effect-karnataka-congress- Dinesh gundurao