ರಂಗೇರುತ್ತಿದೆ ಗುಜರಾತ್ ಚುನಾವಣೆ ಅಖಾಡ: ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ

ಬೆಂಗಳೂರು, ನವೆಂಬರ್ 27, 2022 (www.justkannada.in): ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ  ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ  ಸತತವಾಗಿ ಹರಿಹಾಯುತ್ತಿದ್ದಾರೆ.

ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಅಸಾದುದ್ದೀನ್ ಓವೈಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ.

2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ ತಕ್ಕ ಪಾಠ ಕಲಿಸಿತು’ ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ.