ಎಚ್ವಿ ರಾಜೀನಾಮೆ ಅಂಗೀಕಾರವಾಗಿಲ್ಲ ! ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್’ನಲ್ಲಿ ನಿಖಿಲ್ ಇಲ್ಲ ಎಂದ ಸಚಿವ ಜಿಟಿ ದೇವೇಗೌಡ

Promotion

ಮೈಸೂರು, ಜೂನ್16, 2019 (www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಹಾಗೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮೈಸೂರಿನಲ್ಲಿ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಎಚ್.ವಿಶ್ವನಾಥ್ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅಂಗೀಕಾರವಾದ ಮೇಲೆ ಬದಲಾವಣೆಯ ವಿಚಾರದ ಕುರಿತು ಚರ್ಚೆ ನಡೆಸಲಾಗುತ್ತದೆ. ಅವರ ರಾಜೀನಾಮೆ ಅಂಗೀಕಾರ ಆಗುವವರೆಗೂ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡುವ ಮಾತೇ ಇಲ್ಲ ಎಂದರು.

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರ ಹುದ್ದೆಯ ರೇಸ್ ನಲ್ಲಿ ಇಲ್ಲ. ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ಕೆಲವರು ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಬೇಕೆಂದು ತಿಳಿಸಿದ್ದಾರೆ.