ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ- ಮಾಜಿ ಶಾಸಕ  ವೈಎಸ್ ವಿ ದತ್ತಾ…

Promotion

ಬೆಂಗಳೂರು,ಜೂ,6,2019(www.justkannada.in):  ಜೆಡಿಎಸ್ ನ ರಾಜ್ಯಾಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಮುಂದುವರೆಯುತ್ತಾರೆ ಎಂದು ಜೆಡಿಎಸ್ ಮುಖಂಡ ಮಾಜಿ ಶಾಸಕ ವೈಎಸ್ ವಿ ದತ್ತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಮಾಜಿ ಶಾಸಕ ವೈಎಸ್ ವಿ ದತ್ತಾ, ಜೆಡಿಎಸ್ ಕಾರ್ಯಕರ್ತರಿಗೆ ಹೆಚ್. ವಿಶ್ವನಾಥ್ ಅವರ ಮಾರ್ಗ ದರ್ಶನ ಬೇಕು. ಹೀಗಾಗಿ ಹೆಚ್ ವಿಶ್ವನಾಥ್ ಅವರೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವಿಶ್ವನಾಥ್ ಅವರ ಮನವೊಲಿಸುತ್ತಾರೆ ಎಂದು ತಿಳಿಸಿದ್ದಾರೆ.

ಹಾಗೆಯೇ ತಮಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ವೈಎಸ್ ವಿ ದತ್ತಾ, ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಹಿನ್ನಡೆಯಾದ ಕಾರಣ ನೀಡಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ. ಆದರೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ತಾವೇ ಮುಂದುವರೆಯುವಂತೆ ಹೆಚ್.ವಿಶ್ವನಾಥ್ ಅವರ ಮನವೊಲಿಸಲು ಜೆಡಿಎಸ್  ನಾಯಕರು ಯತ್ನಿಸಿದ್ದಾರೆ.

Key words: H.Vishwanath  will continue as a JDS president-  Former MLA YS V Datta

#Vidanasoudha #YSVDatta #HVishwanath #JDSpresident