ಕಾಂಗ್ರೆಸ್ ನಾಯಕರು ಹಾಗೂ ಸಿದ್ದರಾಮಯ್ಯ ಬೀಗುವ ಅಗತ್ಯವಿಲ್ಲ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ನವೆಂಬರ್,2,2021(www.justkannada.in):  ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು,  ಸಿಂದಗಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಈ ಕುರಿತು  ಮಾತನಾಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಉಪ ಚುನಾವಣಾ ಫಲಿತಾಂಶ ಮುಂಬರುವ ಚುನಾವಣೆಗೆ ದಿಕ್ಸೂಚಿಯಲ್ಲ. ಹಾನಗಲ್ ಕ್ಷೇತ್ರದಲ್ಲಿ ಕೂಡ ನಮ್ಮ ಅಭ್ಯರ್ಥಿ ಶಿವರಾಜ್ ಸಜ್ಜನರ್ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಅಲ್ಪ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಹಾಗಂತ ಕಾಂಗ್ರೆಸ್ ನಾಯಕರು, ವಿಪಕ್ಷ ನಾಯಕ ಸಿದ್ದರಾಮಯ್ಯ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಬೀಗುವ ಅಗತ್ಯವಿಲ್ಲ ಎಂದರು.

ಸಿಂದಗಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಗೆಲುವು ಸಾಧಿಸಿದ್ದಾರೆ. 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಸಿಂದಗಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸಿದ್ದೇವೆ. ಇಲ್ಲಿ ಸಿಎಂ ಬೊಮ್ಮಾಯಿ ನಾಯಕತ್ವದ ಪ್ರಶ್ನೆ ಉದ್ಭವವಾಗಲ್ಲ, ಚುನಾವಣೆ ಎಂದ ಮೇಲೆ ಸೋಲು-ಗೆಲುವು ಸಹಜ, ಸೋಲಾಗಲಿ, ಗೆಲುವಾಗಲಿ ಎಲ್ಲರೂ ಸಮಾನವಾಗಿ ಹಂಚಿಕೊಳ್ಳಬೇಕು ಹೊರತು ಯಾವುದೇ ಒಬ್ಬ ವ್ಯಕ್ತಿಯನ್ನು ಆರೋಪಿಸುವುದು ಸರಿಯಲ್ಲ ಎಂದು ಬಿಎಸ್ ವೈ ತಿಳಿಸಿದರು.

Key words: hanagal-no need – Congress leaders –Siddaramaiah- Former CM- BS Yeddyurappa