ಟೀಂ ಇಂಡಿಯಾ ಆಯ್ಕೆ ಸಮಿತಿ ಬದಲಿಸಲು ಹರ್ಭಜನ್‌ ಸಿಂಗ್‌ ಒತ್ತಾಯ

Promotion

ಮೊಹಾಲಿ, ನವೆಂಬರ್ 2, 2019 (www.justkannada.in): ವೆಸ್ಟ್‌ ಇಂಡೀಸ್‌ ವಿರುದ್ಧದ ಕ್ರಿಕೆಟ್‌ ಸರಣಿಗೆ ಕೇರಳದ ವಿಕೆಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ ಅವರನ್ನು ಕೈಬಿಟ್ಟಿದ್ದಕ್ಕೆ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಶಶಿ ತರೂರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಹರ್ಭಜನ್‌, ಆಯ್ಕೆ ಸಮಿತಿ ನಿರ್ಧಾರವನ್ನು ಟೀಕಿಸಿದ್ದಾರೆ. ಕೂಡಲೇ ಹೊಸ ಆಯ್ಕೆ ಸಮಿತಿ ರಚಿಸುವಂತೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರನ್ನು ಒತ್ತಾಯಿಸಿದ್ದಾರೆ.

ಹಲವು ಅವಕಾಶ ಹೊರತಾಗಿಯೂ ಭಾರೀ ವೈಫ‌ಲ್ಯ ಕಂಡಿರುವ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ಗೆ ಅವಕಾಶ ನೀಡಲಾಗಿದೆ. ಆಯ್ಕೆ ಸಮಿತಿ ಈ ನಿರ್ಧಾರದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.