ಭಜರಂಗದಳದ ಕಾರ್ಯಕರ್ತ ಹರ್ಷ ನಿವಾಸಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ : ವೈಯಕ್ತಿಕ ಆರ್ಥಿಕ ನೆರವು. 

Promotion

ಶಿವಮೊಗ್ಗ,ಮಾರ್ಚ್,5,2022(www.justkannada.in):  ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹರ್ಷನ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹರ್ಷ ಕುಟುಂಬಕ್ಕೆ  ವೈಯಕ್ತಿಕ  ಒಂದು ಲಕ್ಷ ಆರ್ಥಿಕ ನೆರವು ನೀಡಿದರು.

ಎಸ್ ಡಿಪಿಐ ಪಿಎಫ್ ಐ ನಿಷೇಧದ ಬಗ್ಗೆ ಕೇಂದ್ರ ಕ್ರಮ ಕೈಗೊಳ್ಳಲಿ- ಗೃಹ ಸಚಿವ ಅರಗ ಜ್ಞಾನೇಂದ್ರ

ಇನ್ನು ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ಬಂಧನವಾಗಿದೆ.  ಘಟನೆಗೆ ಸಂಬಂಧ ಎಸ್ ಡಿಪಿಐ ಮತ್ತು  ಪಿಎಫ್ ಐ ನಿಷೇಧದ  ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ. ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

Key words: harsha-residence-central minister-shoabha karandlaje