“ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಮೂವರು ಸಾವು”

Promotion

ಹಾಸನ,ಮಾರ್ಚ್,21,2021(www.justkannada.in) : ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ಬೆಂಕಿ ದುರಂತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.jk

ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಆಸಿಡ್ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿ ಧಗಧಗನೇ ಉರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

 Hassan-Chemical-carrying-lorry-pulti-three-dead

ಮೃತರನ್ನು ಲಾರಿ ಚಾಲಕ ಪುಟ್ಟರಾಜು, ಪ್ರಮೋದ, ಪರಮೇಶ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

key words : Hassan-Chemical-carrying-lorry-pulti-three-dead